ಲಾಲ್ ಚೌಕ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲೆತ್ನಿಸಿದ ಬಿಜೆಪಿ ಕಾರ್ಯಕರ್ತರು ವಶಕ್ಕೆ - trying to hoist national flag at clock tower
🎬 Watch Now: Feature Video
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾಲ್ ಚೌಕ್‌ನಲ್ಲಿನ ಕ್ಲಾಕ್ ಟವರ್ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸಲು ಯತ್ನಿಸಿದ ಕುಪ್ವಾರದ ಮೂವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಶ್ಮೀರದಲ್ಲಿ ಎಂದಿಗೂ ತ್ರಿವರ್ಣ ಧ್ವಜ ಮಾತ್ರ ಹಾರಾಡಬೇಕು. ನಮ್ಮ ಈ ಸಂದೇಶ ಗುಪ್ಕರ್ ಮೈತ್ರಿ (PAGD - ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್)ಯ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಹಾಗೂ ಇತರರಿಗೆ ಎಂದು ಹೇಳಿರುವ ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ.