ಟ್ರಕ್ಗೆ ಡಿಕ್ಕಿ ಹೊಡೆದು 8 ಬಾರಿ ಪಲ್ಟಿಯಾದ ಕಾರು: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ - Car jumped up to 10 feet from truck
🎬 Watch Now: Feature Video
ರಾಯ್‌ಪುರ(ಛತ್ತಿಸ್ಗಡ): ರಾಯ್‌ಪುರ-ಲೋದಾಬಜಾರ್ ಮಾರ್ಗ ಮಧ್ಯೆ ಚಲಿಸುತ್ತಿದ್ದ ಕಾರ್ವೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 10 ಅಡಿ ದೂರ ಹೋಗಿ ಬಿದ್ದಿದ್ದು, 8 ಸಲ ಪಲ್ಟಿ ಹೊಡೆದಿದೆ. ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಕಾರ್ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.