thumbnail

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರೊಟೆಸ್ಟ್​​: ರಾಷ್ಟ್ರಪತಿ ಭೇಟಿಯಾದ ಸೋನಿಯಾ ಗಾಂಧಿ ನಿಯೋಗ!

By

Published : Dec 17, 2019, 6:01 PM IST

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಇದೀಗ ವಿಪಕ್ಷಗಳು ಸಹ ಇದರಲ್ಲಿ ಭಾಗಿಯಾಗಿ ರಾಷ್ಟ್ರಪತಿಗೆ ಈ ಮಸೂದೆ ಹಿಂಪಡೆದುಕೊಳ್ಳುವಂತೆ ಮನವಿ ಮಾಡಿವೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದ್ದು, ತದನಂತರ ಸೋನಿಯಾ ಗಾಂಧಿ ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆಗೆ ಈಶಾನ್ಯ ರಾಜ್ಯಗಳು ಸೇರಿದಂತೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಜನರ ಧ್ವನಿ ಕೇಳಿಸುತ್ತಿಲ್ಲ. ತಕ್ಷಣವೇ ಈ ಮಸೂದೆ ಹಿಂಪಡೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.