ಜಮ್ಮು-ಕಾಶ್ಮೀರದ ದೋಡಾದಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು - earthquake News
🎬 Watch Now: Feature Video
ಶ್ರೀನಗರ: ದೋಡಾ ಚೆನಬ್ ಕಣಿವೆಯಲ್ಲಿ ಬೆಳಗ್ಗೆ 10.42ರ ಸುಮಾರಿಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6ರಷ್ಟು ತೀವ್ರತೆ ದಾಖಲಾಗಿದೆ. ಇದರಿಂದಾಗಿ ಜನ ಭಯಭೀತರಾಗಿದ್ದು, ಮನೆಯಿಂದ ಹೊರ ಬಂದಿದ್ದಾರೆ. ಆದರೆ, ಯಾವುದೇ ಪ್ರಾಣಾಪಾಯವಾದ ವರದಿಯಾಗಿಲ್ಲ. ಭೂಕಂಪನ ಸಂಭವಿಸಿದ ವೇಳೆಯ ವಿಡಿಯೋ ಲಭ್ಯವಾಗಿದ್ದು, ಅದರಲ್ಲಿ ಮನೆಯೊಳಗಿನ ವಸ್ತುಗಳು, ಫ್ಯಾನ್ಗಳು ನಡುಗುತ್ತಿರುವ ದೃಶ್ಯ ಸೆರೆಯಾಗಿದೆ.