ಕಂಬಕ್ಕೆ ಡಿಕ್ಕಿ ಹೊಡೆದ ಬಸ್: ವಿದ್ಯುತ್ ಹರಿದು ಐವರ ದುರ್ಮರಣ - Five died due to electrocution in TN
🎬 Watch Now: Feature Video
ತಂಜಾವೂರು(ತಮಿಳುನಾಡು): ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಪ್ರವಹಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ. ವರ್ಕುರ್ ರೋಡ್ನಲ್ಲಿ ಬಸ್ ಚಲಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಎಸ್ಪಿ ದೇಶಮುಖ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆಗೆ ಆದೇಶ ನೀಡಿದ್ದಾರೆ.