ರಾಕೇಶ್ ಟಿಕಾಯತ್‌ಗೆ ಕಪ್ಪು ಧ್ವಜ ತೋರಿಸಿದ ವ್ಯಕ್ತಿಗೆ ರೈತರಿಂದ ಥಳಿತ - ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್
🎬 Watch Now: Feature Video
ಗುಜರಾತ್: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ನಾಲ್ಕು ತಿಂಗಳಿನಿಂದ ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಹಾಗೂ ಅವರ ಬೆಂಬಲಿಗರು ವಿವಿಧ ರಾಜ್ಯಗಳಿಗೆ ಪ್ರವಾಸ ಕೈಗೊಂಡು ರೈತರನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿರುವ ಟಿಕಾಯತ್ ಇಂದು ಗುಜರಾತ್ ಪಾಲನ್‌ಪುರ ತಲುಪಿದಾಗ ಯುವಕನೊಬ್ಬ ಕಪ್ಪು ಧ್ವಜ ಪ್ರದರ್ಶಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ರೈತರು ಆತನಿಗೆ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದರು.