ಮೂರ್ತಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ: ನಿಯಂತ್ರಣಕ್ಕೆ ಬಾರದ ಅಗ್ನಿಜ್ವಾಲೆ ನಂದಿಸಲು ಹರಸಾಹಸ - ಮೂರ್ತಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ
🎬 Watch Now: Feature Video

ಪಟುಲಿ: ಕೋಲ್ಕತ್ತಾದ ಪಟುಲಿಯಲ್ಲಿರುವ ಮೂರ್ತಿ ತಯಾರಿಸುವ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದ ಕೂಡಲೇ 4 ವಾಹನಗಳೊಂದಿಗೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಪಟುಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸಹ ಸ್ಥಳಕ್ಕೆ ಧಾವಿಸಿದ್ದಾರೆ. ಸಂಪೂರ್ಣವಾಗಿ ನಿಯಂತ್ರಣ ಬಾರದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
Last Updated : Oct 31, 2020, 6:34 PM IST