ಪೀಠೋಪಕರಣಗಳ ಗೋದಾಮಿಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ- ವಿಡಿಯೋ - Fire accident
🎬 Watch Now: Feature Video

ಅಸನ್ಸೋಲ್ (ಪಶ್ಚಿಮ ಬಂಗಾಳ): ಇಲ್ಲಿನ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಚೆಲಿಡಂಗಾ ಪ್ರದೇಶದಲ್ಲಿ ಪೀಠೋಪಕರಣಗಳ ಗೋದಾಮಿನಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.