ಕೇಶ್ವಾಪುರದ ಕೊಳಗೇರಿಯಲ್ಲಿ ಸಿಲಿಂಡರ್ ಸ್ಫೋಟ; 5 ಮನೆ ಭಸ್ಮ - ಕೇಶ್ತಾಪುರದ ನಾಯಪಟ್ಟಿ ಕ್ರಿಶ್ಚಿಯನ್ ಪ್ಯಾರಾದ ಕೊಳೆಗೇರಿ ಪ್ರದೇಶದಲ್ಲಿ ಬೆಂಕಿ
🎬 Watch Now: Feature Video
ಕೇಶ್ವಾಪುರದ ನಾಯಪಟ್ಟಿ ಕ್ರಿಶ್ಚಿಯನ್ ಪ್ಯಾರಾದ ಕೊಳಗೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 5 ಮನೆ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಂಡ ಪ್ರದೇಶದಲ್ಲಿ ಎರಡು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಕೇಶ್ವಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಅವಘಡದಿಂದ ಯಾವುದೇ ಸಾವು-ನೋವು ಉಂಟಾಗಿಲ್ಲ.