ಡ್ರೋಣ್​ ಮೂಲಕ ಸೋಂಕು ನಿವಾರಕ ಸಿಂಪಡಿಸಲು ನಗರ ಪಾಲಿಕೆ ನಿರ್ಧಾರ!

🎬 Watch Now: Feature Video

thumbnail

By

Published : Apr 8, 2020, 6:51 PM IST

ಹೆಚ್ಚುತ್ತಿರುವ ಕೊರೊನಾ ವೈರಸ್​ ಪ್ರಕರಣಗಳನ್ನು ನಿಯಂತ್ರಿಸಲು ಅಹಮದಾಬಾದ್‌ ನಗರದಲ್ಲಿ ಡ್ರೋನ್ ಮೂಲಕ ಸೋಂಕು ನಿವಾರಕವನ್ನು ಸಿಂಪಡಿಸಲಾಗುತ್ತಿದೆ. ಅಹಮದಾಬಾದ್​ ಮಹಾನಗರ ಪಾಲಿಕೆಯ ಅಗ್ನಿಶಾಮಕ ಇಲಾಖೆ ಅಭಿವೃದ್ಧಿಪಡಿಸಿದ ಈ ಡ್ರೋನ್​ನಲ್ಲಿ, ನಗರದ ವಿವಿಧ ಜನದಟ್ಟಣೆಯಿರುವ ಪ್ರದೇಶಗಳಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸುತ್ತದೆ. ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಕ್ಲಸ್ಟರ್ ಕ್ವಾರಂಟೈನ್ ಪ್ರದೇಶದಲ್ಲಿ ಸೋಂಕು ನಿವಾರಕವನ್ನು ಡ್ರೋನ್ ಮೂಲಕ ಸಿಂಪಡಿಸಲು ಪಾಲಿಕೆ ಯೋಜಿಸಿದೆ. ಸದ್ಯ ಈ ಪ್ರದೇಶಗಳಲ್ಲಿ ಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿದ್ದು, ಈ ವೇಳೆ, ಪಾಲಿಕೆ ಡ್ರೋನ್ ಮೂಲಕ ಸೋಂಕು ನಿವಾರಕ ಸಿಂಪಡಿಸುತ್ತದೆ. 25 ಕೆಜಿ ತೂಕದ ಈ ಡ್ರೋನ್ 10 ಲೀಟರ್ ಸೋಂಕು ನಿವಾರಕವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಸದ್ಯ ಎಂಟು ಕ್ಲಸ್ಟರ್‌ಗಳಲ್ಲಿ ಸೋಂಕು ನಿವಾರಕ ಸಿಂಪಡಿಸುವುದಾಗಿ ಯೋಜಿಸಲಾಗಿದೆ. ಈ ಡ್ರೋನ್ ಎರಡು ಕಿಲೋಮೀಟರ್ ದೂರವನ್ನು ಕ್ರಮಿಸಬಲ್ಲದು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.