ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ... ಕಂದಕಕ್ಕೆ ಉರುಳಿದ ಬಸ್, ಮಗು ಸೇರಿ ನಾಲ್ವರು ಸಾವು! - ರಾಯಗಡ ಬಸ್ ಅಪಘಾತ ಸುದ್ದಿ
🎬 Watch Now: Feature Video

ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಬಸ್ವೊಂದು ಕಂದಕಕ್ಕೆ ಉರಳಿ ಬಿದ್ದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಬೋರ್ಘಾಟ್ನ ಮುಂಬೈ-ಪುಣೆ ಹೆದ್ದಾರಿ ಪಕ್ಕದಲ್ಲಿ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.