ಬೈಕ್ 'ನೇಣಿಗೇರಿಸಿ' ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ..!
![ETV Thumbnail thumbnail](https://etvbharatimages.akamaized.net/etvbharat/prod-images/320-214-10728722-936-10728722-1613987706131.jpg)
ಕೊಲ್ಹಾಪುರ( ಮಹಾರಾಷ್ಟ್ರ): ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಮತ್ತು ವಿಪಕ್ಷಗಳು ಅಲ್ಲಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ಕೈಗೊಂಡಿವೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಾರ್ವಜನಿಕರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು,ಬೈಕ್ ಅನ್ನು 'ನೇಣಿಗೇರಿಸಿ' ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.