ದಿವ್ಯಾಂಗ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಅತ್ಯಾಚಾರ - ಬಿಲಾಸ್ಪುರದಲ್ಲಿ ವಿಶೇಷಚೇತನ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
🎬 Watch Now: Feature Video

ದನ ಮೇಯಿಸಲು ತೆರಳಿದ್ದ 16 ವರ್ಷದ ದಿವ್ಯಾಂಗ ಬಾಲಕಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿರುವ ಘಟನೆ ಛತ್ತೀಸ್ಗಢ್ನ ಬಿಲಾಸ್ಪುರ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದನ ಮೇಯಿಸಲು ತೆರಳಿದ್ದ ದಿವ್ಯಾಂಗ ಬಾಲಕಿಯನ್ನು ದುಷ್ಕರ್ಮಿಗಳಿಬ್ಬರು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದರು. ವಿಷಯ ಪೋಲಿಸರಿಗೆ ತಿಳಿದಿದ್ದು, ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಯ ಖಾಸಗಿ ಭಾಗಗಳಿಗೆ ಪೆಟ್ಟಾಗಿದ್ದು, ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.