ದೆಹಲಿಯಲ್ಲಿ ವರುಣನ ಆರ್ಭಟ: ನೀರಿನಲ್ಲಿ ಬಸ್ ಮುಳುಗಿ ಓರ್ವ ಪ್ರಯಾಣಿಕ ಸಾವು - ಮಿಂಟೋ ಬ್ರಿಡ್ಜ್
🎬 Watch Now: Feature Video
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದೆಹಲಿ- ಎನ್‌ಸಿಆರ್ ಪ್ರದೇಶದ ರಸ್ತೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಮಿಂಟೋ ಬ್ರಿಡ್ಜ್ ಕೆಳಗಡೆ ಬಸ್ವೊಂದು ನೀರಿನಲ್ಲಿ ಮುಳುಗಡೆಯಾಗಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಳಿದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆಯು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.