ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ: ಮಗಳು ಹೇಳಿದ್ದು ಹೀಗೆ..! - ಪ್ರಣವ್ ಮರ್ಯಾದಾ ಹತ್ಯೆ ಪ್ರಕರಣ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6356897-thumbnail-3x2-amurtha.jpg)
ಹೈದರಾಬಾದ್: 2018ರಲ್ಲಿ ತನ್ನ ಇಚ್ಛೆಗೆ ವಿರುದ್ಧವಾಗಿ ಮಗಳು ಕೆಳಜಾತಿಯ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ಆಕೆಯ ಪತಿಯನ್ನೇ ಹತ್ಯೆಗೈದ ಆರೋಪ ಎದುರಿಸುತ್ತಿದ್ದ ಉದ್ಯಮಿ ಮಾರುತಿ ರಾವ್ ಶವವಾಗಿ ಪತ್ತೆಯಾಗಿದ್ದಾರೆ. ದಲಿತ ಯುವಕನನ್ನ ಹತ್ಯೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ತಿರುನಗಾರು ಮಾರುತಿ ರಾವ್ ಖೈರತಾಬಾದ್ನ ಆರ್ಯವೈಶ್ಯ ಭವನದಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಹೇಳುವ ಪ್ರಕಾರ ಮಾರುತಿ ರಾವ್ ವಿಷ ಸೇವಿಸಿ ಪ್ರಾಣ ಬಿಟ್ಟಿದ್ದಾರಂತೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡು ಬರುತ್ತಿದ್ದು, ಪೋಸ್ಟ್ ಮಾರ್ಟಮ್ ರಿಪೋರ್ಟ್ ಬಂದ ಬಳಿಕವಷ್ಟೇ ಸಾವಿಗೆ ನಿಜವಾದ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.