ವ್ಯಾಕ್ಸಿನ್ ತೆಗೆದುಕೊಳ್ಳಲು ಆಸ್ಪತ್ರೆಗೆ ಬಂದ ವೃದ್ಧನೊಂದಿಗೆ ಅನುಚಿತ ವರ್ತನೆ.. ವಿಡಿಯೋ! - ವ್ಯಾಕ್ಸಿನ್ ತೆಗೆದುಕೊಳ್ಳಲು ಆಸ್ಪತ್ರೆಗೆ ಬಂದ ವೃದ್ಧನೊಂದಿಗೆ ಅನುಚಿತ ವರ್ತನೆ
🎬 Watch Now: Feature Video
ಜಬಲ್ಪುರ್(ಮಧ್ಯಪ್ರದೇಶ): ಮಹಾಮಾರಿ ಕೊರೊನಾ ವೈರಸ್ ವಿರುದ್ಧಧ ಹೋರಾಟ ಮುಂದುವರೆದಿದೆ. ಈಗಾಗಲೇ 45 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ವ್ಯಾಕ್ಸಿನ್ ಪಡೆದುಕೊಳ್ಳುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅದೇ ರೀತಿ ಹಿರಿಯ ನಾಗರಿಕರು ವ್ಯಾಕ್ಸಿನ್ ಪಡೆದುಕೊಳ್ಳಲು ಸರ್ಕಾರಿ ಆಸ್ಪತ್ರೆಗಳತ್ತ ದಾಪುಗಾಲು ಹಾಕ್ತಿದ್ದಾರೆ. ಇದೀಗ ಮಧ್ಯಪ್ರದೇಶಧ ಜಬಲ್ಪುರ್ ಕೋವಿಡ್ ವ್ಯಾಕ್ಸಿನ್ ಸೆಂಟರ್ನಲ್ಲಿ ಲಸಿಕೆ ಪಡೆದುಕೊಳ್ಳಲು ಬಂದಿದ್ದ ವೃದ್ಧನೊಂದಿಗೆ ಅಲ್ಲಿನ ಆರೋಗ್ಯ ಸಿಬ್ಬಂದಿ ಅನುಚಿತವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ಇದರ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಆಸ್ಪತ್ರೆಯ ಸಿಬ್ಬಂದಿಯನ್ನ ವ್ಯಾಕ್ಸಿನೇಷನ್ ಕರ್ತವ್ಯದಿಂದ ತೆಗೆದು ಹಾಕಲಾಗಿದ್ದು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.