ಮೇಕ್ ಇನ್ ಇಂಡಿಯಾ ಬಗ್ಗೆ ನಮಗೆ ಗೌರವವಿದೆ... ಆದ್ರೆ ದೇಶದಲ್ಲಿ ನಡೆಯುತ್ತಿರುವುದೇನು? ಕನ್ನಿಮೋಳಿ ಪ್ರಶ್ನೆ
🎬 Watch Now: Feature Video
ನವದೆಹಲಿ: ರಾಹುಲ್ ಗಾಂಧಿ ಅವರ ರೇಪ್ ಇನ್ ಇಂಡಿಯಾ ಹೇಳಿಕೆಯು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಆಕ್ರೋಶ ಭುಗಿಲೇಳಲು ಕಾರಣವಾಗಿದೆ. ಈ ಕುರಿತು ಲೋಕಸಭೆಯಲ್ಲಿ ಮಾತನಾಡಿರುವ ಡಿಎಂಕೆ ಸಂಸದೆ ಕನ್ನಿಮೋಳಿ, ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾಗೆ ನಾವು ಗೌರವ ನೀಡುತ್ತೇವೆ. ಆದರೆ ದೇಶದಲ್ಲಿ ನಡೆಯುತ್ತಿರುವುದು ಏನು!? ರಾಹುಲ್ ಗಾಂಧಿ ಹೇಳಿರುವುದು ಅದೇ ವಿಷಯದ ಬಗ್ಗೆ. ದೇಶದಲ್ಲಿ ಮೇಕ್ ಇನ್ ಇಂಡಿಯಾ ನಡೆಯುತ್ತಿಲ್ಲ. ದೇಶದಲ್ಲಿ ಪ್ರತಿದಿನ ಮಹಿಳೆಯರ ಮೇಲೆ ಅತ್ಯಾಚಾರದಂತಹ ಹೇಯ ಕೃತ್ಯ ನಡೆಯುತ್ತಿವೆ. ಅದನ್ನೇ ರಾಹುಲ್ ಗಾಂಧಿ ಹೇಳುವ ಪ್ರಯತ್ನ ನಡೆಸಿದ್ದಾರೆ ಎಂದಿದ್ದಾರೆ.
Last Updated : Dec 13, 2019, 1:25 PM IST