ಕಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ವಿಡಿಯೋ
🎬 Watch Now: Feature Video
ಆಂಧ್ರ ಪ್ರದೇಶ: ವಿಜಯನಗರಂ ಕಲೆಕ್ಟರೇಟ್ ಜಂಕ್ಷನ್‌ನ ಸಿಗ್ನಲ್ ಬಳಿ ನಿಲ್ಲಿಸಿದ್ದ ಕಾರಿಗೆ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆರ್‌ಡಬ್ಲ್ಯುಎಸ್ ಉಪ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಜಂಕ್ಷನ್ ಬಳಿ ಕಾರು ತಿರುವು ತೆಗೆದುಕೊಳ್ಳುತ್ತಿದ್ದಾಗ ಅದೇ ಸಮಯದಲ್ಲಿ ವೇಗವಾಗಿ ಬಂದ ಖಾಸಗಿ ಬಸ್ ಕಾರಿನ ಮೇಲೆ ನುಗ್ಗಿದೆ. ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಘಟನೆ ನಡೆದ ಕೂಡಲೇ ಬಸ್ ಚಾಲಕ ಪರಾರಿಯಾಗಿದ್ದಾನೆ. ಈ ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.