ಬಸ್ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಲಾರಿ... ಕಾರ್ತಿಕ ಸೋಮವಾರದಂದೇ ಮಗು ಸೇರಿ ದಂಪತಿ ಸಾವು! - ಗುಂಟೂರು ರಸ್ತೆ ಅಪಘಾತ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5040158-305-5040158-1573554843895.jpg)
ಅವರೆಲ್ಲ ದಿನಗೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಾರ್ತಿಕ ಸೋಮವಾರದಂದು ಶಿವನ ದೇವಸ್ಥಾನಕ್ಕೆ ತೆರಳಿದವರು ಜೀವಂತವಾಗಿ ವಾಪಾಸ್ ಬರಲೇ ಇಲ್ಲ. ಹೌದು, ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಗು ಸೇರಿ ದಂಪತಿ ಸಾವನ್ನಪ್ಪಿದ್ದಾರೆ. ಇಲ್ಲಿನ ತಿಮ್ಮಾಪುರಂ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರು ಕಾರ್ತಿಕ ಸೋಮವಾರದ ಹಿನ್ನೆಲೆ ಚಿಲಕಲೂರಿಪೇಟದಲ್ಲಿರುವ ಶಿವಾಲಯಕ್ಕೆ ತೆರಳಲು ಬಸ್ಗಾಗಿ ರಸ್ತೆಪಕ್ಕದಲ್ಲಿ ನಿಂತಿದ್ದರು. ಈ ವೇಳೆ, ಕಬ್ಬಿಣ ತುಂಬಿದ ಲಾರಿಯೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಇವರ ಮೇಲೆ ಹರಿದಿದೆ. ಪರಿಣಾಮ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಂಪತಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.