ಲೋಕಸಭೆಯಲ್ಲಿ ಭಾಗಿಯಾಗಿ ಸಂಸದೆ ಸುಮಲತಾ ಭಾಷಣ: ಯಾವ ವಿಷಯದ ಬಗ್ಗೆ ಬೆಳಕು ಚೆಲ್ಲಿದ್ರು? - ಲೋಕಸಭೆಯಲ್ಲಿ ಸುಮಲತಾ
🎬 Watch Now: Feature Video
ಮಂಡ್ಯದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ತಕ್ಷಣವೇ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಲೋಕಸಭೆಯಲ್ಲಿ ಮನವಿ ಮಾಡಿದರು. ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮಂಡ್ಯದಲ್ಲಿರುವ ಕೇಂದ್ರೀಯ ವಿದ್ಯಾಲಯ ಹಳೆ ಕಟ್ಟಡವಾಗಿದೆ. ಮಳೆಗಾಲದ ಸಮಯದಲ್ಲಿ ವಿದ್ಯಾರ್ಥಿಗಳು ಅನೇಕ ತೊಂದರೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ತಕ್ಷಣವೇ ಸರ್ಕಾರ ಸೂಕ್ತ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.