ಬಿಹಾರದಲ್ಲಿ ಎನ್ಡಿಎಗೆ ಜಯ ನಿಶ್ಚಿತ ಎಂದ ಶಾ... ನಿತೀಶ್ ನಿವೃತ್ತಿ ಬಗ್ಗೆ ಪ್ರತಿಕ್ರಿಯೆಗೆ ನಕಾರ! - ಬಿಹಾರದಲ್ಲಿ ಎನ್ಡಿಎ ಗೆಲುವು
🎬 Watch Now: Feature Video
ಕೋಲ್ಕತ್ತಾ: ಬಿಹಾರದಲ್ಲಿ ನಾಳೆ ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದ್ದು, ಅದಕ್ಕೂ ಮುಂಚಿತವಾಗಿ ಬಿಹಾರದಲ್ಲಿ ಭಾರತೀಯ ಜನತಾ ಪಾರ್ಟಿ ಗೆಲ್ಲುವುದು ಬಹುತೇಕ ಖಚಿತ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, ಬಿಹಾರದಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ ಎಂದಿದ್ದಾರೆ. ಆದರೆ ಇದೇ ವೇಳೆ ನಿತೀಶ್ ಕುಮಾರ್ ರಾಜಕೀಯ ನಿವೃತ್ತಿ ಬಗ್ಗೆ ತಾವು ಏನೂ ಹೇಳಲ್ಲ ಎಂದಿದ್ದಾರೆ.