'ಮಹಾ' ಡಿಸಿಎಂ ಪಟ್ಟ ಇನ್ನೂ ಅಂತಿಮವಾಗಿಲ್ಲ: ಕಾಂಗ್ರೆಸ್ ನಾಯಕ - ಮಹಾರಾಷ್ಟ್ರ ರಾಜಕೀಯ ಸುದ್ದಿ
🎬 Watch Now: Feature Video
ಮುಂಬೈ: ಮಹಾರಾಷ್ಟ್ರ ಸಿಎಂ ಆಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ನಾಳೆ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಮಹಾ ಮೈತ್ರಿಯಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಈ ಸರ್ಕಾರದಲ್ಲಿ ಯಾರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾಸಾಹೇಬ್ ಥೋರಟ್ ಹೇಳಿದ್ದಾರೆ.