ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳಡಿ ತಾಯಿ ಮಗಳು ಸಿಲುಕಿರುವ ಶಂಕೆ - ನಾಲ್ಕು ಅಂತಸ್ತಿನ ಕಟ್ಟಡ ಕುಸಿತ ರಕ್ಷಣಾ ಕಾರ್ಯಾಚರಣೆ
🎬 Watch Now: Feature Video
ಕಾನ್ಪುರ (ಉತ್ತರ ಪ್ರದೇಶ): ಕಾನ್ಪುರದ ಮೂಲ್‌ಗಂಜ್ ಪ್ರದೇಶದಲ್ಲಿ ಗುರುವಾರ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಕಾನ್ಪುರ ನಗರದ ಎಸ್‌ಎಸ್‌ಪಿ ಡಾ.ಪ್ರೀತಿಂದರ್ ಸಿಂಗ್, ಮಹಿಳೆ ಮತ್ತು ಬಾಲಕಿ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಸೇನಾ ತಂಡವನ್ನೂ ಕರೆಯಿಸಲಾಗಿದೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದ್ದಾರೆ.