100 ವರ್ಷದಲ್ಲೇ ಕಂಡು ಕೇಳರಿಯದ ಮಳೆ: ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರು! - ತೆಲಂಗಾಣದಲ್ಲೀ ಭೀಕರ ಮಳೆ ಪ್ರವಾಹ
🎬 Watch Now: Feature Video

ಹೈದರಾಬಾದ್: ಮುತ್ತಿನ ನಗರಿ ಹೈದರಾಬಾದ್ನಲ್ಲಿ ಕಳೆದ 100 ವರ್ಷಗಳಲ್ಲೇ ಕಂಡು ಕೇಳರಿಯದ ರೀತಿಯಲ್ಲಿ ಮಳೆ ಅಬ್ಬರಿಸಿದ್ದು, ಮಳೆ ನೀರಿನ ರಭಸಕ್ಕೆ ರಸ್ತೆಯಲ್ಲಿ ನಿಂತಿದ್ದ ಕಾರು ಕೊಚ್ಚಿಕೊಂಡು ಹೋಗಿದೆ. ಮಳೆಯಾರ್ಭಟಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದ್ದು, ಅನೇಕ ಪ್ರದೇಶಗಳು ಭಾರಿ ಮಳೆಯಿಂದಾಗಿ ಸಂಪೂರ್ಣವಾಗಿ ಜಲಾವೃತಗೊಂಡಿವೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಾಖಲೆ ಪ್ರಮಾಣದ ಮಳೆ ಸುರಿಯುತ್ತಿದೆ.