ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನರ ಸಾವು: ‘ಸಂತೋಷ’ಪುರದಲ್ಲಿ ಮಡುಗಟ್ಟಿದ ದುಃಖ! - ರಿಂಗಸ್ ರಸ್ತೆ ಅಪಘಾತದಲ್ಲಿ ಎಂಟು ಜನ ಸಾವು
🎬 Watch Now: Feature Video
ಬಸ್ ಮತ್ತು ಟೆಂಪೋ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಎಂಟು ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ನಡೆದಿದೆ. ರಿಂಗಸ್ನಿಂದ ಖಾಟೂ ಕಡೆ ಬಸ್ ತೆರಳುತ್ತಿತ್ತು. ಅತ್ತ ಖಾಟೂ ಕಡೆಯಿಂದ ರಿಂಗಸ್ ಕಡೆ ಟೆಂಪೋ ಹೋಗುತ್ತಿತ್ತು. ಸಂತೋಷಪುರದಲ್ಲಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಎಂಟು ಜನ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ಅಧಿಕಾರಿಗಳು ಘಟನಾಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.