ಹೋಟೆಲ್ನಲ್ಲೇ ಒಗ್ಗಟ್ಟು ಪ್ರದರ್ಶನ: ಬಿಜೆಪಿ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ ಶಾಸಕರು! - ಶಿವಸೇನೆ+ಎನ್ಸಿಪಿ+ಕಾಂಗ್ರೆಸ್
🎬 Watch Now: Feature Video
ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಅನಿರೀಕ್ಷಿತವಾಗಿ ದಿಢೀರ್ ಸರ್ಕಾರ ರಚನೆಯಾದ ಬಳಿಕ ಶಿವಸೇನಾ, ಕಾಂಗ್ರೆಸ್ ಮತ್ತು ಎನ್ಸಿಪಿ ತಮ್ಮ ಶಾಸಕರನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ರೆಸಾರ್ಟ್ ರಾಜಕೀಯದ ಮೊರೆ ಹೋಗಿವೆ. ಮೂರು ಪಕ್ಷಗಳು ತಮ್ಮ ಶಾಸಕರನ್ನು ಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ಸೇರಿಸಿ, ಒಗ್ಗಟ್ಟು ಪ್ರದರ್ಶಿಸಿವೆ. ಈ ವೇಳೆ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ ಮೂರು ಪಕ್ಷದ ಶಾಸಕರು, ನಾವು ಶರದ್ ಪವಾರ್, ಉದ್ಧವ್ ಠಾಕ್ರೆ ಹಾಗೂ ಸೋನಿಯಾ ಗಾಂಧಿ ನಾಯಕತ್ವದಲ್ಲಿ ನಮ್ಮ ಪಕ್ಷಕ್ಕೆ ಪ್ರಾಮಾಣಿಕವಾಗಿರುತ್ತೇವೆ ಎಂದು ಪ್ರಮಾಣ ಸ್ವೀಕರಿಸಿದರು. ಜತೆಗೆ ನಾವು ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ. ಬಿಜೆಪಿಗೆ ಅನುಕೂಲವಾಗುವ ಯಾವುದೇ ಕ್ರಮಕ್ಕೆ ಮುಂದಾಗುವುದಿಲ್ಲ ಎಂದು ಒಗ್ಗಟ್ಟಿನಿಂದ ಹೇಳಿದ್ರು.