thumbnail

By

Published : Dec 23, 2019, 8:12 PM IST

ETV Bharat / Videos

ದೇವರ ದರ್ಶನಕ್ಕೆ ತೆರಳಿದವರು ವಾಪಸ್​​​​​ ಬರಲೇ ಇಲ್ಲ... ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವು!

ವೇಗವಾಗಿ ಬರುತ್ತಿದ್ದ ಟ್ರಕ್​ವೊಂದು ಮಿನಿ ಟೆಂಪೋಗೆ ಗುದ್ದಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ. ಇಲ್ಲಿನ ಮಲಹೇ ಗ್ರಾಮದ ಬಳಿ ವೇಗವಾಗಿ ಬಂದ ಟ್ರಕ್​ವೊಂದು ನಿಯಂತ್ರಣ ಕಳೆದುಕೊಂಡು ಎದುರಿಗೆ ಬರುತ್ತಿದ್ದ ಮಿನಿ ಟೆಂಪೋಗೆ ಗುದ್ದಿದೆ. ಪರಿಣಾಮ ಆರು ಜನ ಸಾವನ್ನಪ್ಪಿದ್ದು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿನಿ ಟೆಂಪೋದಲ್ಲಿ ಸುಮಾರು 10 ಜನರು ಪ್ರಯಾಣಿಕರು ದೇವಸ್ಥಾನಕ್ಕೆ ತೆರಳಿ ಮಥುರಾಗೆ ವಾಪಸ್ಸಾಗುತ್ತಿದ್ದರು ಎನ್ನಲಾಗ್ತಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ರಕ್​ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.