ವರುಣನ ಅಬ್ಬರಕ್ಕೆ ತತ್ತರಿಸಿದ ವಾಣಿಜ್ಯ ನಗರಿ...ಜನಜೀವನ ಅಸ್ತವ್ಯಸ್ತ - Mahalakshmi Race Course area.
🎬 Watch Now: Feature Video
ಮಹಾರಾಷ್ಟ್ರದ ವಿವಿಧೆಡೆ ವರುಣ ಅವಾಂತರ ಸೃಷ್ಟಿಸಿದ್ದಾನೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಲ್ಲಿನ ಮಹಾಲಕ್ಷ್ಮಿ ರೇಸ್ ಕೋರ್ಸ್ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಇದಲ್ಲದೆ ಇಲ್ಲಿನ ಹಿಂದ್ ಮಾತಾ ಪ್ರದೇಶ ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಜನರು ಓಡಾಡಲು ಹರಸಾಹಸ ಪಡುವಂತಾಗಿದೆ. ಇನ್ನೂ ಈ ಕುರಿತಂತೆ ಜನರ ಸುರಕ್ಷತೆಯ ದೃಷ್ಟಿಯಿಂದ ಯಾರು ಹೊರಬರದಂತೆ ಮುಂಬೈ ಪೊಲೀಸರು ಮನವಿ ಮಾಡಿಕೊಂಡಿದ್ದು, ಅಗತ್ಯವಿದ್ದರೆ ಮಾತ್ರ ಮನೆಯಿಂದಾಚೆ ಬರುವಂತೆ ಕೋರಿದ್ದಾರೆ. ಈ ನಡುವೆ ಮಳೆಯಾರ್ಭಟ ನಾಳೆಯವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.