ಟ್ಯಾಂಕರ್ ಲಾರಿ & ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು! - ಒಂದೇ ಕುಟುಂಬದ ನಾಲ್ವರು ಸಾವು
🎬 Watch Now: Feature Video
ಕೊಯಂಬತ್ತೂರು: ಟ್ಯಾಂಕರ್ ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 8 ಮಂದಿ ಕೇರಳದಿಂದ ತಮಿಳುನಾಡಿಗೆ ತೆರಳುತ್ತಿದ್ದರಂತೆ. ಈ ವೇಳೆ ಅಪಘಾತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.