Watch video : 4 ಮರಿಗಳೊಂದಿಗೆ ಪ್ರವಾಸಿಗರಿಗೆ ದರ್ಶನ ನೀಡಿದ ಹುಲಿರಾಯ - ಹುಲಿ ವಿಡಿಯೋ
🎬 Watch Now: Feature Video
ಉತ್ತರಾಖಂಡ : ರಾಮ್‌ನಗರ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನವು ಭಾರತದ ಅತ್ಯಂತ ಹಳೆಯ, ಜನಪ್ರಿಯ ರಾಷ್ಟ್ರೀಯ ಉದ್ಯಾನವನವಾಗಿದೆ. ಇದು ಭಾರತದ ಬಂಗಾಳ ಹುಲಿಗಳಿಗೆ ರಕ್ಷಣಾ ವಲಯವಾಗಿ ಕಾರ್ಯನಿರ್ವಹಿಸುತ್ತಿದೆ. ಕಾರ್ಬೆಟ್ ಹುಲಿ ಸಂರಕ್ಷಿತಾರಣ್ಯದಲ್ಲಿ ತನ್ನ 4 ಮರಿಗಳೊಂದಿಗೆ ಹುಲಿಯೊಂದು ಪ್ರವಾಸಿಗರಿಗೆ ದರ್ಶನ ನೀಡಿದೆ. ಉದ್ಯಾನವನಕ್ಕೆ ಭೇಟಿ ನೀಡಿದ ಪ್ರವಾಸಿಗರು ಈ ದೃಶ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋದಲ್ಲಿ ಹುಲಿ ತನ್ನ 4 ಮರಿಗಳೊಂದಿಗೆ ಓಡಾಡುತ್ತಿರುವುದು ಕಂಡು ಬಂದಿದೆ.