ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್ - ಟ್ರಕ್ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಭಸ್ಮ
🎬 Watch Now: Feature Video

ಭದ್ರಕ್: ಒಡಿಶಾದ ಭದ್ರಕ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 16 ರಲ್ಲಿ ಟ್ರಕ್ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಭಾನುವಾರ ಭದ್ರಕ್ ಜಿಲ್ಲೆಯ ಸಹಪುರ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಈ ಟ್ರಕ್ ಕೋಲ್ಕತ್ತಾದಿಂದ ಹೈದರಾಬಾದ್‌ಗೆ ತೆರಳುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ.