ಲಂಚದ ಹಣ ಹಂಚಿಕೊಳ್ಳಲು ಇಬ್ಬರು ಪೊಲೀಸರ ನಡುವೆ ಫೈಟ್... ಸಿಸಿಟಿವಿಯಲ್ಲಿ ವಿಡಿಯೋ ಸೆರೆ - ಸಿಸಿಟಿವಿಯಲ್ಲಿ ವಿಡಿಯೋ
🎬 Watch Now: Feature Video
ಪ್ರಯಾಗ್ರಾಜ್(ಯುಪಿ): ಲಂಚದ ಹಣ ಹಂಚಿಕೊಳ್ಳುವ ವಿಚಾರವಾಗಿ ಇಬ್ಬರು ಪೊಲೀಸರು ಪರಸ್ಪರ ಹೊಡೆದಾಡಿಕೊಂಡಿದ್ದು, ಇದರ ವಿಡಿಯೋ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಕೈಯಲ್ಲಿದ್ದ ಲಾಠಿಯಿಂದ ಇಬ್ಬರು ಹೊಡೆದಾಡಿಕೊಂಡಿದ್ದು, ಈ ವೇಳೆ ಮತ್ತಿಬ್ಬರು ಸ್ಥಳದಲ್ಲೇ ಉಪಸ್ಥಿತರಿದ್ದರು. ಈಗಾಗಲೇ ಈ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.