ಕೇರಳದಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರ: ಎಸ್‌ಡಿಪಿಐ ಕಾರ್ಯಕರ್ತನ ಅಂಗಡಿಗೆ ಬೆಂಕಿ - ಕೇರಳದಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ
🎬 Watch Now: Feature Video
ಆಲಪ್ಪುಜ( ಕೇರಳ): ಜಿಲ್ಲೆಯ ವಾಯಲಾರ್‌ನಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಮುಖ ಮುಚ್ಚಿದ ಪುರುಷರ ಗುಂಪೊಂದು ಸ್ಥಳದಲ್ಲಿದ್ದ ಅಂಗಡಿಗಳನ್ನು ಮುಚ್ಚಲು ಸೂಚಿಸಿ, ಕೆಲ ಅಂಗಡಿಗಳನ್ನು ಧ್ವಂಸ ಮಾಡಿದೆ. ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಎಸ್‌ಡಿಪಿಐ ಕಾರ್ಯಕರ್ತ ಮುನೀರ್ ಅವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಜಿಲ್ಲೆಯ ಅನೇಕ ಭಾಗಗಳಲ್ಲಿ ಇದೇ ರೀತಿಯ ಘರ್ಷಣೆಗಳು ನಡೆದಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.