ಬೈಕ್ಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಮೂವರು ಸಾವು...ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ! - ಬೈಕ್ಗೆ ಡಿಕ್ಕಿ ಹೊಡೆದ ಕಾರು
🎬 Watch Now: Feature Video
ತಿರುಪ್ಪುರ(ತಮಿಳುನಾಡು): ಗೆಳೆಯನನ್ನು ಭೇಟಿಯಾಗಿ ವಾಪಸ್ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಹಾಗೂ ಕಾರು ಡ್ರೈವ್ ಮಾಡುತ್ತಿದ್ದ ವಿದ್ಯಾರ್ಥಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತಮಿಳುನಾಡಿನ ತಿರುಪ್ಪುರದಲ್ಲಿ ಈ ಅಪಘಾತ ಸಂಭವಿಸಿದೆ. ಐವರು ಕಾಲೇಜು ವಿದ್ಯಾರ್ಥಿಗಳು ಗೆಳೆಯನನ್ನು ಭೇಟಿ ಮಾಡಿ ವಾಪಸ್ ಬರುತ್ತಿದ್ದರು. ವೇಗವಾಗಿ ಚಾಲನೆ ಮಾಡುತ್ತಿದ್ದರಿಂದ ಕಾರು ನಿಯಂತ್ರಣಕ್ಕೆ ಸಿಗದೆ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Last Updated : Aug 3, 2020, 8:29 PM IST