ಕೃಷಿ ಕಾಯ್ದೆ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಪ್ರಯತ್ನ : ತೋಮರ್ - ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸುದ್ದಿ
🎬 Watch Now: Feature Video
ಮೊರೆನಾ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸೋಮವಾರ ತಮ್ಮ ಸ್ವಂತ ಕ್ಷೇತ್ರವಾದ ಮಧ್ಯಪ್ರದೇಶದ ಮೊರೆನಾಕ್ಕೆ ಭೇಟಿ ನೀಡಿ ಮೂರು ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ರೈತರೊಂದಿಗೆ ಚರ್ಚಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಪ್ರತಿಭಟನಾನಿರತ ರೈತರು ಮುಂದಿನ ಸುತ್ತಿನ ಸಭೆಯಲ್ಲಿ ಕೃಷಿ ಕಾನೂನುಗಳ ಷರತ್ತು ಪ್ರಕಾರ ಚರ್ಚಿಸುತ್ತಾರೆ ಎಂದು ಸರ್ಕಾರ ನಿರೀಕ್ಷಿಸುತ್ತದೆ. ಕೃಷಿ ಕಾನೂನುಗಳನ್ನು ರದ್ದುಪಡಿಸುವುದನ್ನು ಬಿಟ್ಟು ಬೇರೆ ಏನು ಬೇಕು ಎಂದು ಸರ್ಕಾರಕ್ಕೆ ತಿಳಿಸಿ ಮತ್ತು ನಾವು ಖಂಡಿತವಾಗಿಯೂ ಅವರನ್ನು ಪರಿಗಣಿಸುತ್ತೇವೆ. ರೈತರ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್ಸಿಗೆ ಇಲ್ಲ. ಈ ಮೂರು ಹೊಸ ಕೃಷಿ ಮಸೂದೆಗಳು ರೈತರ ಜೀವನ ಮಟ್ಟದಲ್ಲಿ ಬದಲಾವಣೆ ತರಲಿವೆ. ಈ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತೋಮರ್ ಹೇಳಿದರು.