ಸೇಡಿಗೆ ಸೇಡು... ಮಹಿಳೆಯರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವಿಡಿಯೋ ವೈರಲ್! - ಸಿಸಿಟಿವಿಯಲ್ಲಿ ವಿಡಿಯೋ ವೈರಲ್
🎬 Watch Now: Feature Video
ಬಿವಾನಿ (ಉತ್ತರ ಪ್ರದೇಶ): ಎರಡು ಪ್ರತ್ಯೇಕ ಘಟನೆಗಳಲ್ಲಿ ಮಹಿಳೆಯರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶ ಬಿವಾನಿಯಲ್ಲಿ ನಡೆದಿದೆ. ಸಂತೋಬಾ ಎಂಬ ಮಹಿಳೆ ಮೇಲೆ ಕೆಲ ಮಹಿಳೆಯರು ಹಲ್ಲೆ ನಡೆಸಿದ್ದು, ಮತ್ತೊಂದು ಕಡೆ ಅನಿತಾ ಎಂಬ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ. ಸಂತೋಬಾ ಎಂಬ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರಿಂದ ಕುಪಿತಗೊಂಡ ಕೆಲ ಮಹಿಳೆಯರು ಅನಿತಾ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇದರ ವಿಡಿಯೋ ಇದೀಗ ವೈರಲ್ ಆಗಿವೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಹಿಳೆಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.