ರಸ್ತೆ ಡಿವೈಡರ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು... ವಿಡಿಯೋ - cctu accident
🎬 Watch Now: Feature Video
ಅತಿ ವೇಗವಾಗಿ ಬೈಕ್ ಚಾಲನೆ ಮಾಡುತ್ತಿದ್ದ ಸವಾರ ರಸ್ತೆ ಡಿವೈಡರ್ ಮೇಲಿದ್ದ ಕಂಬವೊಂದಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ವೇಗದ ಚಾಲನೆಯಿಂದಾಗಿ ನಿಯಂತ್ರಣ ಕಳೆದುಕೊಂಡ ಸವಾರ ನೇರವಾಗ ರಸ್ತೆ ಡಿವೈಡರ್ನಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡು ಅಲ್ಲೇ ಬಿದ್ದಿದ್ದ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸವಾರ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ತಿರುಪತಿ ಮೂಲದ ಅನುದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.