thumbnail

ಸುಂದರ ಕಾಡಿನಲ್ಲಿ ಪೈಶಾಚಿಕ ಕೃತ್ಯ... ದಟ್ಟಾರಣ್ಯದಲ್ಲಿ ಯುವತಿ ಮೇಲೆ ಅತ್ಯಾಚಾರ-ಕೊಲೆ!

By

Published : Aug 24, 2019, 5:40 PM IST

ಸುಂದರ ಕಾಡಿನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಆಕೆಯ ತಲೆ ಮೇಲೆ ಬೃಹತ್​ ಕಲ್ಲೊಂದನ್ನು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಗ್ರಾಮ ಬೆಟ್ಟ - ಗುಡ್ಡಗಳ ನಡುವೆ ಇದ್ದು, ದಟ್ಟವಾದ ಅರಣ್ಯ ಪ್ರದೇಶ ಹೊಂದಿದೆ. ಇಂತಹ ಸುಂದರ ಪ್ರದೇಶದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದೆ. ಕೆಲ ದುಷ್ಕರ್ಮಿಗಳು ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ದೌಡಾಯಿಸಿ ಅರೆನಗ್ನ ಸ್ಥಿತಿಯಲ್ಲಿದ್ದ ಯುವತಿಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.