ಸಂಚರಿಸುತ್ತಿದ್ದ ಕಾರು ಬೆಂಕಿಗಾಹುತಿ: ಅಪಾಯದಿಂದ ಚಾಲಕ ಪಾರು - Car burned in Mangalore
🎬 Watch Now: Feature Video
ಮಂಗಳೂರು: ಸಂಚರಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಹೊತ್ತಿ ಉರಿದ ಘಟನೆ ಮಂಗಳೂರು ಸಮೀಪದ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡುವಿನಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಮಯ ಪ್ರಜ್ಞೆಯಿಂದ ಕಾರು ಚಾಲಕ ಕಾರ್ನಾಡು ನಿವಾಸಿ ಮಹಮ್ಮದ್ ಫಯಾಜ್ ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪ ಪಡುಪಣಂಬೂರು ಎಂಬಲ್ಲಿ ಪೆಟ್ರೋಲ್ ಬಂಕ್ನಲ್ಲಿ ಕಾರಿಗೆ ಡೀಸೆಲ್ ಹಾಕಿಸಿಕೊಂಡು ಕೊಲ್ನಾಡು ತಲುಪುತ್ತಿದ್ದಂತೆ ಏಕಾಏಕಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿಯಲಾರಂಭಿಸಿದೆ. ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಹೊರ ಬಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಕಾರು ಭಸ್ಮವಾಗಿದೆ.