ಮಳೆಯಿಂದ ಬಿರುಕು ಬಿಟ್ಟ ರಸ್ತೆ: ವಾಹನ ಸಂಚಾರಕ್ಕೆ ನಿರ್ಬಂಧ - ವಾಹನ ಸಂಚಾರಕ್ಕೆ ನಿರ್ಬಂಧ
🎬 Watch Now: Feature Video
ಕಳೆದೊಂದು ವಾರದಿಂದ ಅಬ್ಬರಿಸಿದ ಮಳೆಗೆ ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ಸಮೀಪದ ಹರೂರು ರಸ್ತೆಯಲ್ಲಿ ದೊಡ್ಡ ದೊಡ್ಡ ಬಿರುಕು ಕಾಣಿಸಿಕೊಂಡಿದ್ದು ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಕಾರವಾರ - ಕೈಗಾ - ಯಲ್ಲಾಪುರ ನಡುವಿನ ರಸ್ತೆಯಲ್ಲಿ ಸುಮಾರು 200 ಮೀಟರ್ ವರೆಗೆ ಬಿರುಕು ಕಾಣಿಸಿಕೊಂಡಿದ್ದು, ಸದ್ಯ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಜಿಲ್ಲೆಯಲ್ಲಿ ಸದ್ಯ ಮಳೆಯ ಪ್ರಮಾಣ ಇಳಿಕೆಯಾಗಿದ್ದು ಪುನಃ ಮಳೆ ಬಂದಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕ ಸಂಪೂರ್ಣ ಕಡಿದು ಹೋಗುವ ಆತಂಕ ಎದುರಾಗಿದೆ.