ರಾಯಚೂರು: ಮಾಸ್ಕ್ ಧರಿಸದ ಬೈಕ್ ಸವಾರರಿಗೆ ಪೊಲೀಸರಿಂದ ದಂಡ - ರಾಯಚೂರು ಜಿಲ್ಲಾ ಪೊಲೀಸ್
🎬 Watch Now: Feature Video

ರಾಯಚೂರು: ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆದ್ರೆ ಕೆಲ ದ್ವಿಚಕ್ರ ವಾಹನ ಸವಾರರು ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದಾರೆ. ಅಂತಹವರಿಗೆ ಜಿಲ್ಲಾ ಪೊಲೀಸ್ ಇಲಾಖೆ ದಂಡ ಹಾಕುತ್ತಿದೆ. ನಗರದ ಚಂದ್ರಮೌಳೇಶ್ವರ ಸರ್ಕಲ್ನಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸವಾರರನ್ನು ತಡೆದ ಪೊಲೀಸರು ದಂಡ ಹಾಕಿ ಬಿಸಿ ಮುಟ್ಟಿಸಿದ್ದಾರೆ.