ಕಲಬುರಗಿಯಲ್ಲಿ ಮತ್ತೆ ವರುಣನ ಅಬ್ಬರ... ಮನೆಗಳಿಗೆ ನೀರು ನುಗ್ಗಿ ಅವಾಂತರ - North Karnataka Rainfall
🎬 Watch Now: Feature Video
ಕಳೆದೆರಡು ದಿನಗಳಿಂದ ಶಾಂತವಾಗಿದ್ದ ವರುಣ ನಿನ್ನೆ ರಾತ್ರಿಯಿಂದ ಮತ್ತೆ ಅಬ್ಬರಿಸಿದ್ದಾನೆ. ಇಡೀ ರಾತ್ರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಿಗೆ ನೀರು ನುಗ್ಗಿ ಜನತೆ ಪಡಬಾರದ ಕಷ್ಟ ಪಡುತ್ತಿದ್ದಾರೆ. ನೀರು ನಿಂತು ಇಡೀ ರಾತ್ರಿ ಜಾಗರಣೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನೊಂದೆಡೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವು ರಸ್ತೆ ಸಂಪರ್ಕಗಳು ಕಡಿತಗೊಂಡಿವೆ.