ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಳ..! - Rainfall in Kodagu district
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9184650-thumbnail-3x2-sss.jpg)
ಕೊಡಗು(ಭಾಗಮಂಡಲ): ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದಿರುವ ಹಿನ್ನೆಲೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಅದರಂತೆ ಕೊಡಗಿನಲ್ಲೂ ಕಳೆದ ಎರಡು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಪ್ರಮುಖ ಧಾರ್ಮಿಕ ಪುಣ್ಯಕ್ಷೇತ್ರವಾದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿಯೂ ನೀರಿನ ಹರಿವಿನಲ್ಲಿ ಏರಿಕೆ ಆಗುತ್ತಿದೆ. ನಿನ್ನೆಯಿಂದ ವ್ಯಾಪ್ತಿಯ ಬ್ರಹ್ಮಗಿರಿ ತಪ್ಪಲು, ಪುಷ್ಪಗಿರಿ, ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ತ್ರಿವೇಣಿ ಸಂಗಮದಲ್ಲಿ ನೀರಿನ ಒಳ ಹರಿವು ಸುಮಾರು 2 ಅಡಿಗಳಷ್ಟು ಹೆಚ್ಚಿದೆ. ಅಕ್ಟೋಬರ್ 17 ರಂದು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ಇರುವುದರಿಂದ ಮಳೆ ಹೀಗೆ ಮುಂದುವರೆದರೆ ಭಾಗಮಂಡಲ - ತಲಕಾವೇರಿ ಸಂಪರ್ಕ ರಸ್ತೆ ಕಡಿತಗೊಳ್ಳುವ ಸಾಧ್ಯತೆಗಳಿವೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.