ಮಾರ್ಚ್ 7 ರಂದು ಸಿಎಂ ಹಾವೇರಿ ಪ್ರವಾಸ : ಸ್ಥಳ ಪರಿಶೀಲಿಸಿದ ಪಾಟೀಲ್ - B,C Patil latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6321710-thumbnail-3x2-dr.jpg)
ಹಾವೇರಿ ಜಿಲ್ಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಶನಿವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಹಿರೇಕೆರೂರು ತಾಲೂಕಿನ ದೂದಿಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 286 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ದೂದಿಹಳ್ಳಿ ಗ್ರಾಮದ ಹೊರವಲಯದ ಮೊರಾರ್ಜಿ ಹಾಗೂ ಕಿತ್ತೂರು ರಾಣೆ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸಿ.ಎಂ.ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ದೂದಿಹಳ್ಳಿ ಹೊರವಲಯದಲ್ಲಿ ಬೃಹತ್ ವೇದಿಕೆ ಸಿದ್ದಪಡಿಸಲಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಅಧಿಕಾರಿಗಳು ಕಾರ್ಯಕ್ರಮ ನಡೆಯುವ ಸ್ಥಳದ ಪರಿಶೀಲನೆ ನಡೆಸಿದರು.