ಶಿರಾ ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ ಮುಖಂಡರಿಂದ ಆರೋಪ-ಪ್ರತ್ಯಾರೋಪ - Shira assembly by-election
🎬 Watch Now: Feature Video
ಶಿರಾ ವಿಧಾನಸಭಾ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿರುವ ಟಿ.ಬಿ.ಜಯಚಂದ್ರ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಲು ಮುಂದಾಗಿದ್ದು, ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನೊಂದೆಡೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಕಾರ್ಯಕರ್ತರಲ್ಲಿ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಕ್ಷೇತ್ರದಲ್ಲಿ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರಚಾರದಲ್ಲಿ ತೊಡಗಿದ್ದರೆ, ಇನ್ನೊಂದೆಡೆ ಬಿಜೆಪಿಗೆ ಕ್ಷೇತ್ರದಲ್ಲಿನ ನೀರಾವರಿ ಯೋಜನೆಗಳ ಸ್ಪಷ್ಟ ಮಾಹಿತಿಯೇ ಇಲ್ಲ ಎಂದು ಕಾಂಗ್ರೆಸ್ ಟೀಕಿಸುತ್ತಿದೆ. ಎರಡೂ ಪಕ್ಷಗಳು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ.