ಕೊಡಗು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆ - ವಿರಾಜಪೇಟೆ ಹಾಗೂ ಸೋಮವಾರಪೇಟೆ
🎬 Watch Now: Feature Video

ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕು ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದ್ದು,ವಿರಾಜಪೇಟೆ ತಾಲೂಕಿನ ಮಾಲ್ದಾರೆ, ನಂಜರಾಯಪಟ್ಟಣ ಸೇರಿದಂತೆ ಹಲವೆಡೆ ಗುಡುಗು, ಗಾಳಿ ಸಹಿತ ಜೋರು ಮಳೆಯಾಗಿದೆ. ಬಿಸಿಲ ಧಗೆಯಿಂದ ಬಸವಳಿದಿದ್ದ ಮಂಜಿನ ನಗರಿ ಮಡಿಕೇರಿಗೆ ಇನ್ನೂ 2 ದಿನಗಳು ಬಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.