ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಿ, 130ರಿಂದ 135 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ : ಬಿಎಸ್ವೈ - ಕಾಂಗ್ರೆಸ್ ಮುಕ್ತ ಕರ್ನಾಟಕ
🎬 Watch Now: Feature Video
ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಾಗುತ್ತದೆ. ಕಾಂಗ್ರೆಸ್ ಮುಕ್ತ ಭಾರತಕ್ಕೆ ಬಿಜೆಪಿ ಪಣತೊಟ್ಟಿದೆ. ಅದೇ ರೀತಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲಾಗುತ್ತದೆ. ಬಿಜೆಪಿಯ ಆಡಳಿತವನ್ನು ಮೆಚ್ಚಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ, ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಿಂದ ಪ್ರತಿಪಕ್ಷಗಳು ಹೊರಬರಬೇಕು. ಬಿಜೆಪಿ ಸರ್ಕಾರವನ್ನು ತರಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತದೆ. ಕನಿಷ್ಠ 130ರಿಂದ 135 ಸ್ಥಾನಗಳನ್ನು ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸದನದಲ್ಲಿ ಹೇಳಿದ್ದಾರೆ.
Last Updated : Feb 3, 2023, 8:19 PM IST