ಡಿಕೆಶಿ ಬಂಧನ: ಚಾಮರಾಜನಗರದಲ್ಲಿ ಒಕ್ಕಲಿಗ ಸಂಘದಿಂದ ಪೊರಕೆ ಚಳವಳಿ.. - ಒಕ್ಕಲಿಗ ಸಂಘದಿಂದ ಪೊರಕೆ ಚಳವಳಿ
🎬 Watch Now: Feature Video
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ನಗರದಲ್ಲಿ ಒಕ್ಕಲಿಗ ಸಂಘದವರು ಪೊರಕೆ ಚಳವಳಿ ನಡೆಸಿ ಆಕ್ರೋಶ ಹೊರಹಾಕಿದರು. ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದವರೆಗೆ ಪೊರಕೆ ಹಿಡಿದು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪೊರಕೆಗಳನ್ನು ರಸ್ತೆಗೆ ಬಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.