ಶಿವಮೊಗ್ಗದಲ್ಲಿ ಅಧಿಕಾರಿಗಳೊಂದಿಗೆ ಸಿಎಂ ಬಿಎಸ್ವೈ ಸಭೆ.. ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ - ಸಿಎಂ ಬಿಎಸ್ವೈ ಸಭೆ
🎬 Watch Now: Feature Video
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದರು. ಜಿಲ್ಲೆಯ ಕೆಲವೊಂದು ಸಮಸ್ಯೆಗಳು ಹಾಗೂ ಬಜೆಟ್ನಲ್ಲಿ ಕೆಲವೊಂದು ಯೋಜನೆಗೆ ಅನುದಾನ ನೀಡುವಂತೆ ಪಕ್ಷದ ಮುಖಂಡರು ಹಾಗೂ ಅಧಿಕಾರಿಗಳು ಸಿಎಂ ಜೊತೆ ಚರ್ಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ ಸಿಇಒ ವೈಶಾಲಿ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಉಪಸ್ಥಿತರಿದ್ದರು.