ಕೋವಿಡ್-19 ಮುನ್ನೆಚ್ಚರಿಕಾ ಕ್ರಮವಾಗಿ ಯಲಹಂಕದಲ್ಲಿ ಔಷಧಿ ಸಿಂಪಡಣೆ.. - Drug spraying in Yalahanka

🎬 Watch Now: Feature Video

thumbnail

By

Published : Mar 30, 2020, 11:13 PM IST

ನಗರದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಭೀತಿ ಹಿನ್ನೆಲೆಯಲ್ಲಿ ಯಲಹಂಕ ವಲಯ ಬಿಬಿಎಂಪಿ ವಾರ್ಡ್ ನಂ.3 ಹಾಗೂ 4ರ ವ್ಯಾಪ್ತಿಯ ಪ್ರದೇಶಗಳಲ್ಲಿ ಜೌಷಧ ಸಿಂಪಡಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಪಾಲಿಕೆ ಸದಸ್ಯೆ ನೇತ್ರಪಲ್ಲವಿ, ಕೋವಿಡ್ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಇದನ್ನು ತಡೆಯಲು ಪ್ರತಿಯೊಬ್ಬರ ಸಹಕಾರ ಮುಖ್ಯ. ಪ್ರಧಾನಿಯವರ ಆದೇಶದಂತೆ ಏ.14ರವರೆಗೂ ಮನೆಯಲ್ಲಿದ್ದು ಸಹಕರಿಸಿ. ಕೊರೊನಾ ನಿಯಂತ್ರಣಕ್ಕಾಗಿ ರಸಾಯನಿಕ ಔಷಧಿ ಸಿಂಪಡಣೆ ಸೇರಿ ಎಲ್ಲಾ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಆರೋಗ್ಯಾಧಿಕಾರಿ ನವೀನ್ ಮಾತನಾಡಿ, ಕೋವಿಡ್-19 ಕ್ಷಿಪ್ರವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ವಾರ್ಡ್ ನಂ.3ಹಾಗೂ 4ರ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಔಷಧಿ ಸಿಂಪಡಣೆ ಮಾಡಲಾಗಿದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.